contact us

ಚಿತ್ರದುರ್ಗ:ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನ ಆಹಾರ ವಾಹಿನಿ (ಆಹಾರ ಕಿಯೋಸ್ಕ್)
ಯೋಜನೆಯ ಸಹಾಯ ಧನ (Subsidy) ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ (Application) ಆಹ್ವಾನಿಸಲಾಗಿದೆ. ಮಾರ್ಚ್ 16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಆಹಾರ ಯೋಜನೆಯಡಿ ಇವಿ ಗೂಡ್ಸ್‌ ಗಾಡಿ ಲಭ್ಯ

ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ
ನಿಗಮದಿಂದ ವಾಹನ ಖರೀದಿಗೆ ರೂ.3.00 ಲಕ್ಷಗಳ ಸಹಾಯಧನ ಬಿಡುಗಡೆ ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕುಗಳು, ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿದೆ